ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯವೆದ್ದು ರಾಜೀನಾಮೆ ನೀಡಿ ಮುಂಬೈಯಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನ ಕೆಲವು ಶಾಸಕರ ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಲಿದೆ.
ಹೀಗಾಗಿ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ರಾಜಕೀಯ ವಿದ್ಯಮಾನ ಇಂದಿನ ಸುಪ್ರೀಂ ತೀರ್ಪಿನಿಂದಾಗಿ ಒಂದು ಹಂತಕ್ಕೆ ಬರುವ ನಿರೀಕ್ಷೆಯಿದೆ. ಸಹಜವಾಗಿಯೇ ಇದು ಶಾಸಕರೂ ಆತಂಕದಿಂದ ತೀರ್ಪಿಗಾಗಿ ಎದುರು ನೋಡುವಂತೆ ಮಾಡಿದೆ.
ಸ್ಪೀಕರ್ ರಾಜೀನಾಮೆ ಅಂಗೀರಿಸದ ಕಾರಣಕ್ಕೆ ಬಂಡಾಯ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ಶುಕ್ರವಾರ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಮಂಗಳವಾರಕ್ಕೆ ವಿಚಾರಣೆ ಮುಂದೂಡಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿತ್ತು. ಅದರಂತೆ ಇಂದು ವಾದ ವಿವಾದಗಳನ್ನು ಆಲಿಸಿ ತೀರ್ಪು ನೀಡಲಿದೆ.