Publish Date: Wed, 02 Aug 2023 (19:20 IST)
Updated Date: Wed, 02 Aug 2023 (19:24 IST)
ರಾಜ್ಯ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವಾಭದ್ರತೆ ಮತ್ತು ವೇತನ ವಿತರಣೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉನ್ನತ ಶಿಕ್ಷಣ ಸಚಿವರಿಗೆ ಶಾಸಕ ಪತ್ರ ಬರೆದಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ಗೆ ಶಾಸಕ ಸುರೇಶ್ ಕುಮಾರ್ ಅವರು ಪತ್ರ ಬರೆದಿದ್ದಾರೆ. ಸರ್ಕಾರ ಕಳೆದ ಮೂರು ತಿಂಗಳಿಂದ ವೇತನ ನೀಡದೇ ನಿರ್ಲಕ್ಷಿಸುತ್ತಿದ್ದು, ಸೇವಾ ಭದ್ರತೆ ಇಲ್ಲದ 13 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಅತಂತ್ರದಲ್ಲಿ ಜೀವನ ನಡೆಸುತ್ತಿದ್ದಾರೆ. ಬಾಕಿ ವೇತನ ಮತ್ತು ಸೇವಾಭದ್ರತೆ ಒದಗಿಸುವಂತೆ ಒತ್ತಾಯಿಸಿ ಉನ್ನತ ಶಿಕ್ಷಣ ಸಚಿವರಿಗೆ ಶಾಸಕ ಸುರೇಶ್ ಕುಮಾರ್ ಪತ್ರದ ಮೂಲಕ ಮನವಿ ಮಾಡಿದ್ದಾರೆ