ತುಮಕೂರು : ಜು.15ರಿಂದ ಶೈಕ್ಷಣಿಕ ವರ್ಷ ಆರಂಭಕ್ಕೆ ಚಿಂತನೆ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಗಳಲ್ಲಿ ಭಗವದ್ಗೀತೆ ಅಳವಡಿಕೆ ಬಗ್ಗೆ ಚರ್ಚೆನಡೆಸಲಾಗುತ್ತಿದೆ. ಚರ್ಚೆ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ‍್ಳಲಾಗುವುದು. ಅಲ್ಲದೇ 1ರಿಂದ 5ನೇ ತರಗತಿ ನಡೆಸಬಾರದು. ಖಾಸಗಿ ಶಾಲೆಗಳು ನಿಯಮ ಉಲ್ಲಂಘಿಸಿದ್ರೆ ಕ್ರಮಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ದಿಂದಾಗಿ ಇತ್ತೀಚೆಗೆ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸಲಾಗಿತ್ತು. ಆದರೆ ದೇಶದಲ್ಲಿ ಇದೀಗ ಕೊರೊನಾ ಎರಡನೇ ಅಲೆ ಪ್ರಾರಂಭವಾದ ಹಿನ್ನಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭಿಸುವ ಬಗ್ಗೆ ಸರ್ಕಾರದಲ್ಲಿ ಗೊಂದಲ ಏರ್ಪಟ್ಟಿದೆ ಎನ್ನಲಾಗಿದೆ.