ರಾಯಣ್ಣ ಬ್ರಿಗೇಡ್ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವಿನ ಕಿತ್ತಾಟ ತಾರಕಕ್ಕೇರಿದ್ದು, ಪಕ್ಷದ ಈ ಬೆಳವಣಿಗೆ ಕುರಿತು ಮಾಜಿ ಸಚಿವ ಸುರೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಪಾಳಯದಲ್ಲಿನ ಇತ್ತೀಚಿನ ಬೆಳವಣಿಗೆಯಿಂದ ಕಾರ್ಯಕರ್ತರಿಗೆ ಬೇಸರ ತಂದಿದೆ. ಯಾವುದೇ ಗೊಂದಲಗಳಿದ್ದರು ಪಕ್ಷದ ವೇದಿಕೆಯಲ್ಲೇ ಚರ್ಚೆಯಾಗಬೇಕು. ಕೆಲವರು ಬಹಿರಂಗವಾಗಿ ಪತ್ರ ಬರೆಯುತ್ತಿರುವುದು ಸರಿಯಲ್ಲ ಎಂದರು.
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.
ಪಕ್ಷದ ವೇದಿಕೆ ಬಿಟ್ಟು ಪ್ರತೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈಬಿಡಬೇಕು ರಾಮಲಾಲ್ ಅವರು ಈಶ್ವರಪ್ಪನವರಿಗೆ ತಾಕೀತು ಮಾಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ