ಬೆಂಗಳೂರು: ತಮ್ಮ ಕಚೇರಿಯಲ್ಲಿ ಕರ್ತವ್ಯದಲ್ಲಿರುವಾಗಲೇ ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾದ ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.
ಹೊಟ್ಟೆ, ಎದೆ ಮತ್ತು ಕೈ ಬೆರಳುಗಳಿಗೆ ಗಾಯವಾಗಿತ್ತು. ಈ ಹಿನ್ನಲೆಯಲ್ಲಿ ವೈದ್ಯರ ತಂಡ ಹೊಟ್ಟೆ, ಎದೆ ಮತ್ತು ಕೈ ಬೆರಳುಗಳಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
ಸದ್ಯಕ್ಕೆ ವಿಶ್ವನಾಥ ಶೆಟ್ಟಿ ಮಲ್ಯ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಗಾಯದ ಎಂಆರ್ ಐ ಸ್ಕ್ಯಾನ್ ಮಾಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ