ಹಾಸನ: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಪ್ರಮುಖ ಭರ್ತಿಯಾಗುತ್ತಿದ್ದು, ಇದೀಗ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ 2 ವರ್ಷಗಳ ಬಳಿಕ ಭರ್ತಿಯಾಗಿದೆ.
ಇದೀಗ ಹೇಮಾವತಿ ಜಲಾಶಯಕ್ಕೆ 23363 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 22532 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಆದ್ದರಿಂದ ನದಿ ತೀರದ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅದರಂತೆ ಹೇಮಾವತಿ ನದಿ ತೀರದ ಪ್ರದೇಶದ ಜನರು ತಮ್ಮ ಆಸ್ತಿ ಹಾಗೂ ಜಾನುವಾರುಗಳ ಮೇಲೆ ನಿಗಾ ಇಡುವಂತೆ ಹೇಳಿದ್ದಾರೆ.
ಈಗಾಗಲೇ ಜಲಾಶಯದಿಂದ 45 ಸಾವಿರದಿಂದ 50 ಸಾವಿರ ಕ್ಯುಸೆಕ್ ನೀರನ್ನು ಹೇಮಾವತಿ ನದಿಗೆ ಬಿಡುಗಡೆಯಾಗುತ್ತದೆ. ಅಲ್ಲದೇ ಈ ಪ್ರಮಾಣವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಮಾವತಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.