Publish Date: Thu, 06 Feb 2020 (12:30 IST)
Updated Date: Thu, 06 Feb 2020 (12:31 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು 10 ಮಂದಿ ಶಾಸಕರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಿದ ಹಿನ್ನಲೆಯಲ್ಲಿ ಇಂದು ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ರಾಜಭವನದ ಗಾಜಿನ ಮನೆಯಲ್ಲಿ ಪ್ರತಿಜ್ಞಾವಿಧಿ ಸಮಾರಂಭ ನಡೆದಿದ್ದು, ರಾಜ್ಯಪಾಲ ವಜೂಬಾಯ್ ವಾಲಾ ಅವರು ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ನೂತನ ಶಾಸಕರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು, ಈ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದಾರೆ.