Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರಿನ ಬೆಳ್ಳಂದೂರು ಬಳಿಯ ಅಂಬಲಿಪುರ ನಿವಾಸಿಯಾದ ಪ್ರದೀಪ್ ಸಾವು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿದೆ. ಅವರು BJP ಶಾಸಕ ಅರವಿಂದ ಲಿಂಬಾಳಿ ಹೆಸರನ್ನು ಡೆತ್ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, BJP ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಇದು ನಡೆಯಬಾರದ ಘಟನೆಯಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಇಂತಹ ಘಟನೆ ಆಗಿದೆ. ಪ್ರದೀಪ್ ಪತ್ನಿ ಪ್ರದೀಪ್ ಸಾವಿಗೆ ನ್ಯಾಯ ಕೊಡಿಸಿ ಅಂತ ಕೇಳಿದ್ದಾರೆ. 1.5 ಕೋಟಿ ನಾವು ಇನ್ವೆಸ್ಟ್ ಮಾಡಿದ್ವಿ. ಒಂದೇ ಒಂದು ಪೈಸೆ ಲಾಭ ಬಂದಿಲ್ಲ. ನಮ್ಮ ಹಣ ವಾಪಸ್ ಕೊಡಿ ಅನ್ನೋದು ಇವರ ವಾದವಾಗಿದೆ. ಶಾಸಕ ಲಿಂಬಾವಳಿ ಹಣ ಕಾಸಿನ ವ್ಯವಹಾರ ಮಾಡಿದ್ದಾರೆ. ಪೊಲೀಸರು ಹಣವನ್ನು ವಾಪಸ್ ಕೊಡಿಸಬೇಕು. ಕೂಡಲೇ ಎಲ್ಲರನ್ನು ಅರೆಸ್ಟ್ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು. ಯಾರೇ ತಪ್ಪಿ ಮಾಡಿದ್ರು ಸಹ ಅದು ತಪ್ಪು. ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಆಗಬೇಕು. MLA ಅವರನ್ನು ಅರೆಸ್ಟ್ ಮಾಡಬೇಕು. ಇಲ್ಲದೆ ಹೋದ್ರೆ ಅವರು ಸಾಕ್ಷಿ ನಾಶ ಮಾಡಬಹುದು ಎಂದು ತಿಳಿಸಿದ್ದಾರೆ.