ಆಫ್ಘಾನಿಸ್ತಾನದಲ್ಲಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ರಷ್ಯಾ, ಚೀನಾ ಮತ್ತು ಪಾಕಿಸ್ತಾನವನ್ನು ತಾಲಿಬಾನ್ ಉಗ್ರ ಸಂಘಟನೆ ಆಹ್ವಾನಿಸಿದೆ.
ಪನ್ ಶೀರ್ ಕಣಿವೆ ಪ್ರದೇಶವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡ ಬೆನ್ನಲ್ಲೇ ತಾಲಿಬಾನ್ ಸರಕಾರ ರಚನೆಗೆ ಅಂತಿಮ ಸಿದ್ಧತೆ ನಡೆಸಿದ್ದು, ಅಧಿಕಾರ ಸ್ವೀಕಾರ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳಾದ ಟರ್ಕಿ, ರಷ್ಯಾ, ಚೀನಾ, ಇರಾನ್, ಕತಾರ್ ಮತ್ತು ಪಾಕಿಸ್ತಾನವನ್ನು ಆಹ್ವಾನಿಸಿದೆ.
ಆಫ್ಘಾನಿಸ್ತಾನದಲ್ಲಿ ಯಾರೇ ಶಸ್ತ್ರಾಸ್ತ್ರ ಕೈಗೆತ್ತಿಕೊಂಡರೂ ಅವರನ್ನು ಶತ್ರುಗಳು ಎಂದು ಪರಿಗಣಿಸಲಾಗುತ್ತದೆ. ಪನ್ ಶೀರ್ ನಲ್ಲಿ ಆದಂತೆ ನಾವು ತಕ್ಕ ಪಾಠ ಕಲಿಸುತ್ತೇವೆ ಎಂದು ಆಫ್ಘಾನಿಸ್ತಾನ ವಕ್ತಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.