ಮಕ್ಕಳಿಗೆ ಸೆಕ್ಸ್ ವಿಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ಗ್ರಾಮಸ್ಥರು ಧರ್ಮದೇಟು ನೀಡಿದ ಘಟನೆ ವರದಿಯಾಗಿದೆ.
ಜಿಲ್ಲೆಯ ವಡ್ಡರ ಕುಪ್ಪೆಯ ಶಾಲೆಯ ಶಿಕ್ಷಕ ಮಕ್ಕಳಿಗೆ ಪಾಠ ಹೇಳಿಕೊಡುವುದು ಬಿಟ್ಟು ಸೆಕ್ಸ್ ವಿಡಿಯೋಗಳನ್ನು ತೋರಿಸುತ್ತಿದ್ದ ಎನ್ನಲಾಗಿದೆ. ವಿಡಿಯೋ ನೋಡದಿದ್ದ ಮಕ್ಕಳ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಮಾಹಿತಿ ನೀಡಿದ್ದಾರೆ.
ಮಕ್ಕಳಿಗೆ ಸೆಕ್ಸ್ ವಿಡಿಯೋ ತೋರಿಸುತ್ತಿರುವ ವಿಷಯ ಗ್ರಾಮಸ್ಥರಿಗೆ ತಿಳಿಯುತ್ತಿದ್ದಂತೆ ಶಾಲೆಗೆ ಬಂದ ಗ್ರಾಮಸ್ಥರು ಶಿಕ್ಷಕನಿಗೆ ಮನಬಂದಂತೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಶಾಲಾ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.