ಬೆಂಗಳೂರು : ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಂಬಳದಾರರ ಮನೆ ಬಾಡಿಗೆ ಭತ್ಯೆಯನ್ನು ಶೇ. 50ಕ್ಕೆ ಹೆಚ್ಚಳ ಮಾಡುವಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ.
ಲೋಕಸಭೆಯ ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ವಿಷಯಗಳ ಮೇಲಿನ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಅವರು,
ಆದಾಯ ತೆರಿಗೆ ನಿಯಮಾವಳಿಗಳಿಗೆ ಸೂಕ್ತ ತಿದ್ದುಪಡಿ ತಂದು ಪ್ರಸ್ತುತ ಶೇ. 40 ರಷ್ಟು ಇರುವ ಮನೆ ಬಾಡಿಗೆ ಭತ್ಯೆಯನ್ನು ಶೇ.50 ಕ್ಕೆ ಏರಿಸಬೇಕು.
ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಇತರ ಸಮನಾದ ನಗರಗಳ ಪಟ್ಟಿಗೆ ಬೆಂಗಳೂರನ್ನು ಸೇರ್ಪಡೆಗೊಳಿಸುವ ಮೂಲಕ ಮಧ್ಯಮ ವರ್ಗದ ಸಂಬಳದಾರರ ಹಿತಾಸಕ್ತಿ ಕಾಯುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಒತ್ತಾಯಿಸಿದ್ದಾರೆ.