ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮುಂದೆ ದಾಂಧಲೆ ಮಾಡಿದ ಪ್ರಕರಣದ ಆರೋಪಪಟ್ಟಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೆಸರಿದ್ದು, ಅವರು ತಕ್ಷಣವೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿದರು.
ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯರವರು ಪಕ್ಷದ ಯುವ ಕಾರ್ಯಕರ್ತರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಷ್ಟ್ರ ನಿರ್ಮಾಣಕ್ಕೆ ಬಳಕೆಯಾಗಬೇಕಾದ ಯುವಜನತೆಯನ್ನು ಬಿಜೆಪಿಯು ಕ್ರಿಮಿನಲ್‌ಗಳನ್ನಾಗಿ ಮಾಡುತ್ತಿದೆ. ಮುಖ್ಯಮಂತ್ರಿಯೊಬ್ಬರ ನಿವಾಸದ ಮೇಲೆ ದಾಳಿ ಮಾಡುವಷ್ಟು ಇವರು ಮುಂದುವರಿದಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿಯವರು ರಾಷ್ಟ್ರಮಟ್ಟದಲ್ಲಿ ಕಳಂಕ ತಂದಿದ್ದಾರೆ ಎಂದು ಜಗದೀಶ್ ವಿ ಸದಂ ಹೇಳಿದರು.