Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಿಜೆಪಿ ಬಿಟ್ಟಿದ್ದ ತೇಜಸ್ವಿನಿ ಗೌಡ ಕಾಂಗ್ರೆಸ್ ಗೆ ಸೇರ್ಪಡೆ

Tejaswini Gowda

Krishnaveni K

ಬೆಂಗಳೂರು , ಶನಿವಾರ, 30 ಮಾರ್ಚ್ 2024 (12:40 IST)
Photo Courtesy: Twitter
ಬೆಂಗಳೂರು: ಇತ್ತೀಚೆಗಷ್ಟೇ ಎಂಎಲ್ ಸಿ ಸ್ಥಾನದ ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದ ತೇಜಸ್ವಿನಿ ಗೌಡ ಈಗ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸಮ್ಮುಖದಲ್ಲಿ ತೇಜಸ್ವಿನಿ ಪಕ್ಷಕಕ್ಕೆ ಸೇರ್ಪಡೆಯಾದರು. ಕೆಲವು ದಿನಗಳ ಹಿಂದಷ್ಟೇ ಅವರು ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಚುನಾವಣೆ ಸಮಯದಲ್ಲಿ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ವಲಸೆ ಹೋಗುವುದು ಸಾಮಾನ್ಯ.

2004 ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರನ್ನೇ ಸೋಲಿಸಿ ತೇಜಸ್ವಿನಿ ಗೌಡ ಸಂಚಲನ ಮೂಡಿಸಿದ್ದರು. ಆಗ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆದ್ದಿದ್ದರು. ಅದಾದ ಬಳಿಕ ಕಳೆದ 10 ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿದ್ದಾರೆ. ಬಿಜೆಪಿ ಅವರಿಗೆ ಎಂಎಲ್ ಸಿ ಸ್ಥಾನವನ್ನೂ ನೀಡಿತ್ತು.

ಇದೀಗ ತಮ್ಮ ಎಂಎಲ್ ಸಿ ಸ್ಥಾನ ಮತ್ತು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ ಮರಳಿ ಕಾಂಗ್ರೆಸ್ ಗೇ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಘರ್ ವಾಪಸಿ ಮಾಡಿದ್ದಾರೆ. ಇದೀಗ ಕಾಂಗ್ರೆಸ್ ನಲ್ಲಿ ಅವರ ನಿರೀಕ್ಷೆಗಳೇನು ಎಂಬುದು ತಿಳಿದುಬಂದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಬಿಕ್ಕಟ್ಟು: ಇಬ್ಬರ ಜಗಳದಲ್ಲಿ ಲಾಭ ಪಡೆದ ಕೆವಿ ಗೌತಮ್