ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಾಗಲಕೋಟೆ ಜಿಲ್ಲೆಯ ತೇರದಾಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಯಡಿಯೂರಪ್ಪ, ತೇರದಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿಜೆಪಿ ಮುಖಂಡ ಸಿದ್ದು ಸವದಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸವದಿಗೆ ವಿಧಾನಪರಿಷತ್ ಸ್ಥಾನ ನೀಡುವ ಭರವಸೆಯೊಡ್ಡಲಾಗಿದೆ ಎನ್ನಲಾಗಿದೆ.
ತೇರದಾಳ ಕ್ಷೇತ್ರದಲ್ಲಿ ಲಿಂಗಾಯುತರು ಮತ್ತು ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಯಡಿಯೂರಪ್ಪ ತೇರದಾಳ ಕ್ಷೇತ್ರದತ್ತ ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ಮತ್ತು ಯಡಿಯೂರಪ್ಪ ಮಧ್ಯೆ ನೇರ ಹಣಾಹಣಿ ನಡೆಯಲಿದೆ.
ಉತ್ತರ ಕರ್ನಾಟಕದಲ್ಲಿ 10-12 ಸ್ಥಾನಗಳನ್ನು ಹೆಚ್ಚಿಸಲು ಹೈಕಮಾಂಡ್ ನಿರ್ಧರಿಸಿದೆ. ಬಿಎಸ್‌ವೈ ಸ್ಪರ್ಧೆಯಿಂದ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.