ಅವಿಶ್ವಾಸ ನಿರ್ಣಯ ಸಂದರ್ಭದಲ್ಲಿ ನನ್ನ ಪರವಾಗಿ ಮತಹಾಕಿದ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ಹೇಳಿದ್ದಾರೆ.
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮೊದಲಿನಿಂದಲೂ ನನ್ನ ಪರವಾಗಿದ್ದರು. ಅವರಿಗೂ ಅವರ ಪಕ್ಷಕ್ಕೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ನನ್ನ ವಿರುದ್ಧ ದಾಖಲೆಗಳಿಲ್ಲದೇ ಮನಬಂದಂತೆ ಆರೋಪ ಮಾಡಿದರು. ಯಾವುದೇ ಸಕಾರಣವಿಲ್ಲದೇ ಅವಿಶ್ವಾಸ ನಿರ್ಣಯ ಮಂಡಿಸಿದರು ಎಂದು ತಿರುಗೇಟು ನೀಡಿದರು.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕೂಡಾ ನನ್ನನ್ನು ಬೆಂಬಲಿಸಿದ್ದರು. ಅವಿಶ್ವಾಸ ನಿರ್ಣಯ ಮಂಡನೆಗೆ ಸೋಲಾದ ನಂತರ ದೇವೇಗೌಡರು ದೂರವಾಣಿ ಕರೆ ಮಾಡಿ ಅಭಿನಂಧಿಸಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.