ರಾಜ್ಯದ ಸಮ್ಮಿಶ್ರ ಸರ್ಕಾರದ ಪತನದ ಬಗ್ಗೆ ಬಿಜೆಪಿ ನಾಯಕರು ನಿರಂತರವಾಗಿ ಪ್ರತ್ಯೇಕ ಹೇಳಿಕೆ ನೀಡುತ್ತಲೆ ಇದ್ದಾರೆ. ಈ ಸರ್ಕಾರ ಪಥನವಾಗುವುದು ನಿಶ್ಚಿತ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡುತ್ತಾರೋ, ಇಲ್ಲವೋ ಎಂಬುದು ಅನುಮಾನ ಎಂದಿದ್ದಾರೆ.
ಕಾಂಗ್ರೆಸ್ನ ಒಳಜಗಳ, ಅತೃಪ್ತಿ, ಅಸಮಾಧಾನಗಳು ಪರಾಕಾಷ್ಠೆ ತಲುಪಿದೆ. ಕಾಂಗ್ರೆಸ್ನ ಕೆಲ ಅತೃಪ್ತ ಶಾಸಕರು ಕಾಂಗ್ರೆಸ್ನ ಹಿರಿಯ ನಾಯಕರ ಸಂಪರ್ಕಕ್ಕೆ ಬರುತ್ತಿಲ್ಲ. ಕಣ್ಮರೆಯಾಗಿದ್ದಾರೆ. ಕಾಂಗ್ರೆಸ್ನ ಕೋಟೆಯೊಳಗೆ ಆವರ ಸೈನಿಕರಿಂದಲೇ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳುವ ಮೂಲಕ ಸರ್ಕಾರ ಹೆಚ್ಚು ದಿನ ಬಾಳಲ್ಲ ಎಂಬ ಸುಳಿವು ನೀಡಿದರು.
ಬಿಜೆಪಿಯ ರೈತ ಮೋರ್ಚಾದ ಅಧ್ಯಕ್ಷ ಹಾಗೂ ಮಾಜಿ ಸಚಿವ ಲಕ್ಷ್ಮಣ್ಸವದಿ ಸಹ ಸರ್ಕಾರ ಉಳಿಯುವುದಿಲ್ಲ. ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಉರುಳಿಸುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು. ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಸಹ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.