ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಹರಡುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಂಪುಟ ಸಭೆ ಕರೆದಿದ್ದಾರೆ.
ಮಧ್ಯಾಹ್ನ 1.30ಕ್ಕೆ ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಂಪುಟ ಸಭೆ ಕರೆದಿದ್ದು, 1 ವಾರದ ಬಂದ್ ಮತ್ತೆ ಮುಂದುವರಿಯುವ ಬಗ್ಗೆ ತೀರ್ಮಾನ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಾಗೇ ಈ ನಡುವೆ ಇಂದು ಸಿಎಂ ಬಿಎಸ್ ವೈ ಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಭೇಟಿ ಮಾಡಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಹಿನ್ನಲೆಯಲ್ಲಿ ಸಿಎಂ ಹಾಗೂ ಸಚಿವ ಸುಧಾಕರ್ ತಲೆಕೆಡಿಸಿಕೊಂಡಿದ್ದಾರೆ ಎನ್ನಲಾಗಿದೆ.