ಮಹಾದಾಯಿ ಹೋರಾಟಗಾರರು ಬೆಂಗಳೂರಿನ ಬಿಜೆಪಿ ಕಚೇರಿ ಮುಂದೆ ಸತ್ಯಾಗ್ರಹ ನಡೆಸದೆ ಮುಖ್ಯಮಂತ್ರಿಯ ಮನೆ ಮುಂದೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ನೀರಿನ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಮನೋಹರ್ ಪರಿಕ್ಕರ್ ಜೊತೆ ಒಂದು ಗಂಟೆಗಳ ಕಾಲ ಚರ್ಚೆ ನಡೆಸಿ ಒಂದು ಪತ್ರವನ್ನು ಬರೆದು ಕೊಟ್ಟಿದ್ದೇವೆ. ಆದರೆ ಸಿಎಂ ಸಿದ್ದರಾಮಯ್ಯ ರಾಜ್ಯದ ರೈತರ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಂದ ಗೋವಾ ಮತ್ತು ಮಹಾರಾಷ್ಟ್ರ ಮುಖಂಡರನ್ನು ಒಪ್ಪಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿಕೆ ಕೊಡಿಸಲಿ ಎಂದು ಸವಾಲು ಹಾಕಿದ್ದಾರೆ.
ಮಹಾದಾಯಿ ವಿಚಾರದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಮನೆ ಮುಂದೆ ಹೋರಾಟಗಾರರು ಸತ್ಯಾಗ್ರಹ ಮಾಡಬೇಕು ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.