Publish Date: Sun, 24 Mar 2019 (10:31 IST)
Updated Date: Sun, 24 Mar 2019 (10:33 IST)
ಮಂಡ್ಯ : ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಕದೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ಸೂಚಿಸಿಲು ಬಿಜೆಪಿ ತೀರ್ಮಾನ ಮಾಡಿದೆ.
ಈ ಮೊದಲು ಡಾ. ಸಿದ್ದರಾಮಯ್ಯರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ ಬಿಜೆಪಿ ಇದೀಗ ಸಿಎಂ ಕುಮಾರಸ್ವಾಮಿ ಅವರನ್ನು ಕಟ್ಟಿಹಾಕುವ ಉದ್ದೇಶದಿಂದ ಇದೀಗ ಸುಮಲತಾ ಅವರಿಗೆ ಬೆಂಬಲ ನೀಡಲು ತೀರ್ಮಾನಿಸಿದೆ.
ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಗೊಳಿಸಿದ ಜೆ.ಪಿ.ನಡ್ಡಾ, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾರ ನಡುವೆ ನೇರ ಸ್ಪರ್ಧೆ ಏರ್ಪಡಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.