ಬೆಂಗಳೂರು : ಬಿಜೆಪಿಗೆ ಮತ ಹಾಕುವವರು ಮುಸ್ಲಿಮರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಖಾನ್ ಅವರುಅಲ್ಪಸಂಖ್ಯಾತ ಸಮುದಾಯದ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿಯವರು ಆಗ್ರಹಿಸಿದ್ದಾರೆ.
ಅಖಿಲ ಭಾರತ ಜಮಿಯತ್ ಉಲ್ ಮನ್ಸೂರ್ ಸಂಘಟನೆಯ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಜಮೀರ್ ಅಹ್ಮದ್ ,’ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ಬಿಜೆಪಿಗೆ ಮತ ಹಾಕಿದರೆ ಅಂಥವರು ನಮ್ಮ ಧರ್ಮದವರೇ ಅಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆಯ ಬಗ್ಗೆಕಿಡಿಕಾರಿದ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜೀಂ, ಜಮೀರ್ ಅಹ್ಮದ್ ಅವರಿಗೆ ಸಂವಿಧಾನವೂ ಗೊತ್ತಿಲ್ಲ. ಖುರಾನ್ ಕೂಡ ತಿಳಿದಿಲ್ಲ. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ವಿಭಜನೆಯ ರಾಜಕಾರಣ ನಡೆಸುತ್ತಿರುವ ಜಮೀರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರ ಹೇಳಿಕೆ ಅಪರಾಧವಾಗಿದ್ದು, ಕ್ಷಮೆ ಕೇಳದೇ ಇದ್ದರೆ ಪ್ರಕರಣ ದಾಖಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.