Publish Date: Fri, 08 Mar 2019 (19:17 IST)
Updated Date: Fri, 08 Mar 2019 (19:18 IST)
ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಭರದ ಸಿದ್ಧತೆ ಆರಂಭಿಸಿದೆ. ತಳ ಮಟ್ಟದಲ್ಲಿ ಚುನಾವಣೆಗೆ ಸಿದ್ಧತೆ ನಡೆಸಲು ಶಕ್ತಿ ಕೇಂದ್ರದ ಪ್ರಮುಖರ ಸಮಾವೇಶ ಆಯೋಜಿಸಲಾಗಿದೆ. ಕೇಂದ್ರ ಗ್ರಹ ಸಚಿವ ರಾಜನಾಥ್ ಸಿಂಗ್ ಈ ಸಮಾವೇಶ ಉದ್ಘಾಟಿಸಲಿದ್ದಾರೆ .
ಇನ್ನೇನು ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಭರದ ಸಿದ್ಧತೆ ನಡೆಸುತ್ತಿದೆ .ಈ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ವಹಿಸಲಾಗಿದೆ. ಮಾ. 9ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ನಾಲ್ಕು ಜಿಲ್ಲೆಗಳ ಮೂರೂ ಲೋಕ ಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರಗಳ ಪ್ರಮುಖರ ಸಭೆ ಆಯೋಜಿಸಲಾಗಿದೆ.
ನಾಲ್ಕು ಜಿಲ್ಲೆಗಳಿಂದ ಸುಮಾರು 10 ಸಾವಿರ ಮಂದಿ ಭಾಗವಹಿಸಲಿದ್ದಾರೆ. ಕೇಂದ್ರ ಗ್ರಹ ಸಚಿವ ರಾಜನಾಥ್ ಸಿಂಗ್ ಮಧ್ಯಾಹ್ನ 1.30 ಗಂಟೆಗೆ ಉದ್ಘಾಟಿಸಲಿದ್ದಾರೆ. ಇದಕ್ಕೆ ನಗರದ ನೆಹರು ಮೈದಾನದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ.
ಈ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 2.30 ಗಂಟೆಗೆ ನಗರದ t m a ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಪ್ರಬುದ್ದರ ಸಮಾವೇಶ ನಡೆಯಲಿದೆ. ಇದರಲ್ಲಿ ಒಂದು ಸಾವಿರ ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.