ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಾರದು ಎಂದು ನನ್ನ ಮನಸ್ಸಿನಲ್ಲಿತ್ತು. ಆದರೆ ಸದ್ಯ ವರಿಷ್ಠರ ಸೂಚನೆ ಮೇರೆಗೆ ನಾನು ಯಾವುದೇ ನಿರ್ಧಾರ ಪ್ರಕಟಿಸುವುದಿಲ್ಲ. ಹೀಗಂತ ಬಿಜೆಪಿಯ ಮಾಜಿ ಸಚಿವೆ ಹಾಗೂ ಸಂಸದೆ ಹೇಳಿದ್ದಾರೆ.
ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಾರದು ಎಂದು ನನ್ನ ಮನಸ್ಸಿನಲ್ಲಿತ್ತು. ಆದ್ರೆ ಸದ್ಯ ವರಿಷ್ಠರ ಸೂಚನೆ ಮೇರೆಗೆ ನಾನು ಯಾವುದೇ ನಿರ್ಧಾರ ಪ್ರಕಟಿಸುವುದಿಲ್ಲ. ಪಕ್ಷದ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.
ಲೋಕಸಭಾ ಉಪ ಚುನಾವಣೆಯಲ್ಲಿ ಶಿವಮೊಗ್ಗ, ಬಳ್ಳಾರಿ, ಮಂಡ್ಯ ಮೂರು ಕಡೆ ಬಿಜೆಪಿ ಗೆಲ್ಲುತ್ತದೆ. ಈ ಮೂಲಕ ಬಿಜೆಪಿಗೆ ಜನ ಬೆಂಬಲ ಇದೆ ಎಂಬುದು ಸಾಬೀತಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸರ್ಕಾರ ಇದೆಯೇ ಎಂದು ಪ್ರಶ್ನೆ ಮಾಡಿದ ಶೋಭಾ ಕರಂದ್ಲಾಜೆ, ಮೊದಲ ದಿನದಿಂದಲೂ ಗೊಂದಲದಲ್ಲಿಯೇ ಸರ್ಕಾರ ನಡೆಯುತ್ತಿದೆ. ಕಾಂಗ್ರೆಸ್, ಜೆಡಿಎಸ್ ಒಳಗಡೆಯೇ ಸಾಕಷ್ಟು ಭಿನ್ನಾಭಿಪ್ರಾಯ ಇದೆ. ವರ್ಗಾವಣೆ ಹಾಗೂ ದೇವಸ್ಥಾನ ಸುತ್ತುವುದರಲ್ಲೇ ಕಾಲ ಕಳೆಯಲಾಗುತ್ತಿದೆ ಎಂದು ಟೀಕಿಸಿದರು.