ಬೆಂಗಳೂರು : ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಆ ಮೂಲಕ ಅನರ್ಹ ಶಾಸಕರ ಭವಿಷ್ಯ ನಿರ್ಧಾರವಾಗಲಿದೆ.
ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆಯ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದೆ. ಮತ ಎಣಿಕೆಗೆ 11 ಎಣಿಕಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, 20 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎನ್ನಲಾಗಿದೆ.
ಹಾಗೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಒಬ್ಬ ರಿಟರ್ನಿಂಗ್ ಅಧಿಕಾರಿ ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿ ನೇಮಿಸಲಾಗಿದ್ದು, 240 ಮತ ಎಣಿಕೆ ಉಸ್ತುವಾರಿ, 240 ಮತ ಎಣಿಕೆ ಸಹಾಯಕ, ಹಾಗೂ 240 ವೀಕ್ಷಕರನನ್ನು ಚುನಾವಣಾ ಆಯೋಗ ನೇಮಿಸಿದೆ ಎನ್ನಲಾಗಿದೆ.