ಬೆಂಗಳೂರು : ಸೆಪ್ಟೆಂಬರ್ 1ರ ಗೌರಿ-ಗಣೇಶ ಹಬ್ಬದಂದು ವಾಹನ ಸವಾರರಿಗೆ ಕೇಂದ್ರ ಸರ್ಕಾರ ಶಾಕಿಂಗ್ ನ್ಯೂಸ್ ವೊಂದನ್ನು ನೀಡಿದೆ.
ಹೌದು. ಕೇಂದ್ರ ಸರ್ಕಾರ ಸೆಪ್ಟೆಂಬರ್ 1ರಂದು ಮೋಟಾರು ವಾಹನ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸುತ್ತಿದೆ. ಈ ಕಾಯ್ದೆಯಂತೆ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ವಾಹನ ಸವಾರರು ಮೂರು ಪಟ್ಟು ದಂಡ ಕಟ್ಟಬೇಕಾಗುತ್ತದೆ.
ಅಲ್ಲದೇ 4 ವರ್ಷದ ನಂತರದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹಾಗೇ ಟೋಪಿಯಂತಹ ಅಥವಾ ಅರ್ಧ ಹೆಲ್ಮೆಟ್ ಧರಿಸಿದರೆ ಫೈನ್ ಹಾಕಲು ಸಂಚಾರಿ ಪೊಲೀಸ್ ಆಯುಕ್ತ ಡಾ. ಬಿ.ಆರ್ ರವಿಕಾಂತೇಗೌಡ ಸೂಚಿಸಿದ್ದಾರೆ ಎನ್ನಲಾಗಿದೆ.