Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಲಹೆ

ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಲಹೆ
ಬೆಂಗಳೂರು , ಬುಧವಾರ, 18 ಆಗಸ್ಟ್ 2021 (08:19 IST)
ಬೆಂಗಳೂರು (ಆಗಸ್ಟ್ 18); ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.

ಈ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸ ಲಾಗಿದೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿ ಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದ ಶಿಕ್ಷಣ ನೀತಿ ಅನುಷ್ಠಾನದ ಕುರಿತಂತೆ ರಾಜ್ಯದಾದ್ಯಂತ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಸಲಹೆ ನೀಡಲಾಯಿತು.
ಈ ನೀತಿ ಜಾರಿಗೆ ಕರ್ನಾಟಕ ರಾಜ್ಯ ಶಿಕ್ಷಣ ಆಯೋಗ ಮತ್ತು ಇತರ ಸಾಂಸ್ಥಿಕ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತೂ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಸೂಚಿಸಲಾಯಿತು. ಖಾಸಗಿಯವರ ಸಹಯೋಗ ಪಡೆದುಕೊಳ್ಳಲೂ ಸಹ ಸಲಹೆ ನೀಡಲಾಯಿತು. ರಾಜ್ಯದ ಜಿ ಇ ಆರ್ (Gross Enrollment Ratio) ಶೇ. 32 ರಷ್ಟು ಇದ್ದು, ಮುಂದಿನ ದಿನಗಳಲ್ಲಿ ಇದನ್ನು ಶೇ. 50 ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ.
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪೂರಕವಾಗಿ ಬಿ.ಎಡ್., ಡಿ.ಎಡ್. ಪಠ್ಯ ವಿಷಯವನ್ನು ಇನ್ನಷ್ಟು ಪರಿಣಾಮಕಾರಿಯಾಗುವಂತೆ ಪರಿಷ್ಕರಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಯುವಕರು ಉದ್ಯೋಗ ಪಡೆದುಕೊಳ್ಳಲು ಅನುವಾಗುವಂತೆ ಜಿಲ್ಲೆಗೊಂದು ತಾಂತ್ರಿಕ ಶಿಕ್ಷಣ ಶಾಲೆಯನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯ್ಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

3ನೇ ಅಲೆ ಭೀತಿ, ಅಪಾರ್ಟ್ಮೆಂಟ್ಗಳಿಗೆ ಬಿಬಿಎಂಪಿಯಿಂದ ಟಫ್ ರೂಲ್ಸ್