ಪ್ರಸಕ್ತ ಸಾಲಿನ 75ನೇ ವರ್ಷದ ಸ್ವಾಂತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ನಗರದ ಮಾಣಿಕ್ ಷಾ ಕವಾಯತು ಮೈದಾನ ಸಜ್ಜುಗೊಂಡಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕರ ಭಾಗಿತ್ವಕ್ಕೆ ನಿರ್ಬಂಧ ಹೇರಿದ್ದು, ಸಾವಿರ ಮಂದಿಗಷ್ಟೇ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.
ಈ ಬಾರಿ ವೈದ್ಯಕೀಯ, ಆರೋಗ್ಯ ಮತ್ತು ಸ್ವಚ್ಛತಾ ಕಾರ್ಯಕರ್ತರು ಹಾಗೂ ನಾನಾ ಇಲಾಖೆಯ ಕೊರೊನಾ ವಾರಿಯರ್ಸ್ 100 ಮಂದಿ ಮತ್ತು ಕೊರೊನಾ ಸೋಂಕಿನಿಂದ ಗುಣಮುಖರಾದ 25 ಮಂದಿಯನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ.
ನಗರದಲ್ಲಿಂದು 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಿದ್ಧತೆಗಳ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಕೋವಿಡ್ -19 ಹಿನ್ನೆಲೆ ಸುರಕ್ಷತೆ ಮತ್ತು ಸರಳ ರೀತಿಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ನಗರದ ಕಬ್ಬನ್ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತ, ಪೆÇಲೀಸ್ ಇಲಾಖೆ ವತಿಯಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಭಾನುವಾರ ಬೆಳಗ್ಗೆ 8.55ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈದಾನಕ್ಕೆ ಆಗಮಿಸಲಿದ್ದಾರೆ. 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆ ಬಳಿಕ ಪರೇಡ್ ವಂದನೆ ಸ್ವೀಕರಿಸಿ ನಾಡಿನ ಜನತೆಗೆ ಸ್ವಾತಂತ್ರೋತ್ಸವ ಸಂದೇಶ ನೀಡಲಿದ್ದಾರೆ ಎಂದು ಹೇಳಿದರು.
ಸಾರ್ವಜನಿಕ ಪ್ರವೇಶ, ಸಾಂಸ್ಕತಿಕ ಕಾರ್ಯಕ್ರಮ ಇಲ್ಲ:
ಕಳೆದ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂತೆ ಈ ಬಾರಿಯಯೂ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಶಾಲೆ-ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಲು ಅವಕಾಶ ಕಲ್ಪಿಸಿಲ್ಲ. ಜತೆಗೆ ಸಾಂಸ್ಕøತಿಕ ಕಾರ್ಯಕ್ರಮವನ್ನು ಕೈಬಿಡಲಾಗಿದೆ. 20 ತುಕಡಿಗಳಿಂದ ಪಥಸಂಚಲನ ನಡೆಯಲಿದ್ದು, ದೂರದರ್ಶನದಲ್ಲಿ ಕಾರ್ಯಕ್ರಮ ನೇರ ಪ್ರಸಾರ ಇರಲಿದೆ ಎಂದು ವಿವರಿಸಿದರು.
20 ತುಕಡಿಯಿಂದ ಪರೇಡ್:
ಈ ಹಿಂದೆ 30ಕ್ಕೂ ಹೆಚ್ಚು ತುಕಡಿಗಳಿಂದ ಪಥಸಂಚಲನ (ಪರೇಡ್) ನಡೆಯುತ್ತಿತ್ತು. ಈ ಬಾರಿ 20 ತುಕಡಿಗಳು ಮಾತ್ರ ಇದ್ದು, 470 ಮಂದಿ ಭಾಗವಹಿಸುತ್ತಿದ್ದಾರೆ. ಎಲ್ಲರಿಗೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಸಿದ್ಧತೆ:
ಶುಕ್ರವಾರ ಪಥಸಂಚಲನ, ನಾಡಗೀತೆ ಹಾಗೂ ರೈತಗೀತೆಯ ಅಂತಿಮ ಹಂತದ ತಾಲೀಮು ನಡೆಯಿತು. ಸಾರ್ವಜನಿಕ ಪ್ರವೇಶ ನಿರ್ಬಂಧ ಹಿನ್ನೆಲೆ ಅತಿಗಣ್ಯರು, ಗಣ್ಯರು, ವಿಶೇಷ ಆಹ್ವಾನಿತರಿಗಾಗಿ 1000 ಆಸನ, ವೇದಿಕೆ ಸಿದ್ಧಪಡಿಸಲಾಗಿದೆ ಎಂದು ಗೌರವ್ ಗುಪ್ತ ತಿಳಿಸಿದರು.
ಪತ್ರಿಕಾಗೋಷ್ಠಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ, ಡಾ.ಎಂ.ಜಿ.ಶಿವಣ್ಣ, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.