Publish Date: Sun, 30 Sep 2018 (20:35 IST)
Updated Date: Sun, 30 Sep 2018 (20:37 IST)
ವಿಧಾನ ಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಹು-ಕೇತು ಒಂದಾಗಿ ತಮ್ಮನ್ನು ಸೋಲಿಸಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಿಸಿದ್ದಾರೆ.
ಸಿದ್ದರಾಮಯ್ಯ ತಮ್ಮ ಭಾವನೆಗಳನ್ನು ಹೊರಹಾಕಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸಿದ್ದರಾಮಯ್ಯನವರು ಯಾವ ಕಾರಣಕ್ಕೆ ಹಾಗೂ ಯಾರನ್ನು ಗಮನದಲ್ಲಿಟ್ಟುಕೊಂಡು ರಾಹು-ಕೇತುಗಳಿಗೆ ಹೋಲಿಕೆ ಮಾಡಿದ್ದಾರೋ ಗೊತ್ತಿಲ್ಲ. ಹಾಗಾಗಿ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಎಂ ಹೆಚ್.ಡಿ.ಕೆ ಹೇಳಿದರು.