ಬೆಂಗಳೂರು : ದೇಶದ 4 ರಾಜ್ಯಗಳಲ್ಲಿ ಈಗಾಗಲೇ ಹಂತ ಹಂತವಾಗಿ ಶಾಲಾ-ಕಾಲೇಜುಗಳ ಆರಂಭವಾದ ಹಿನ್ನಲೆಯಲ್ಲಿ ಕೇಂದ್ರದ ಗೈಡ್ ಲೈನ್ಸ್ ಅನುಗುಣವಾಗಿ ಶಾಲಾ-ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಸೋಂಕು ನಿಯಂತ್ರಣದಲ್ಲಿರುವ ರಾಜ್ಯಗಳಾದ ಪಂಜಾಬ್, ಯುಪಿ, ಸಿಕ್ಕಿಂ, ಹಿಮಾಚಲ ಪ್ರದೇಶದಲ್ಲಿ ಈಗಾಗಲೇ ಶಾಲಾ-ಕಾಲೇಜುಗಳು ಆರಂಭವಾಗಿದೆ. ಅಲ್ಲದೇ ಶಾಲಾ-ಕಾಲೇಜುಗಳ ಆರಂಭಿಸುವ ತೀರ್ಮಾನ ಆಯಾ ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಹಿನ್ನಲೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.