ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ ಬೀಸುತ್ತಿದ್ದು, ಮುಂದಿನ ದಿನಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ,.
ವಿಜಯಪುರದಲ್ಲಿ 10.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಅಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಬೆಳಗಿನ ಜಾವ ಮಂಜು ಮುಸುಕಿರಲಿದೆ.