ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು,ಪಠ್ಯ ಪರಿಷ್ಕರಣೆಗೆ ಕ್ಯಾಮ್ಸ್ ಅಧ್ಯಕ್ಷ ಶಶಿಕುಮಾರ್ ವಿರೋಧ ವ್ಯಕ್ತಪಡಿಸಿದಾರೆ.ಪಠ್ಯಪರಿಷ್ಕರಣೆ ಮಾಡುವುದರಿಂದ ಮಕ್ಕಳಲ್ಲಿ ಹಾಗೂ ಶಿಕ್ಷಕರಲ್ಲಿ ಗೊಂದಲ ಉಂಟಾಗುತ್ತದೆ.
ಮಸಿಎಂ, ಡಿಸಿಎಂ, ಶಿಕ್ಷಣ ಸಚಿವರು ರಾಜ್ಯ ಸಂಘಟನೆಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕು.ಪಠ್ಯ ಪುಸ್ತಕ ಪರಿಷ್ಕರಣೆಗೆ ಕೆಲ ಸಾಹಿತಿಗಳು ಸಿಎಂ ಮೇಲೆ ಒತ್ತಡ ಏರುತ್ತಿರುವುದು ಅನಾರೋಗ್ಯಕರ ಬೆಳವಣಿಗೆ.ಶಿಕ್ಷಣ ತಜ್ಞರು ಹಾಗೂ ಅನುಭವಿ ಶಿಕ್ಷಕರ ಜೊತೆ ಚರ್ಚಿಸಿ ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಬೇಕು.ಏಕಾಏಕಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದು ಸರಿಯಲ್ಲ ಎಂದು ಕ್ಯಾಮ್ಸ್ ಅಧ್ಯಕ್ಷ ಶಶಿಕುಮಾರ್ ಹೇಳಿದ್ದಾರೆ.