ರಾಜಕೀಯದಲ್ಲಿ ಬಿಜೆಪಿಗೆ ನಡುಕ ಉಂಟಾಗಿದೆ. ಹೀಗಂತ ಕಾಂಗ್ರೆಸ್ ಹಿರಿಯ ನಾಯಕ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಪುತ್ರಿ ಪ್ರಿಯಾಂಕಗಾಂಧಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಇದರಿಂದಾಗಿ ಬಿಜೆಪಿಗೆ ನಡುಕವುಂಟಾಗಿದೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ ಗಾಂಧಿ ರಾಜಕೀಯಕ್ಕೆ ಪ್ರವೇಶಿಸಿರುವುದು ಯುವಕರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಇದರಿಂದ ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದೂ ಹೇಳಿದರು. ಶಾಸಕ ಉಮೇಶ್ ಜಾದವ್ ಅವರಿಗೆ ಸಚಿವ ಸ್ಥಾನ ತಪ್ಪಲು ತಾವು ಕಾರಣ ಎಂಬ ಆರೋಪಗಳನ್ನು ನಿರಾಕರಿಸಿದರು.
ಆರೋಪ ಮಾಡುವವರು ಮಾಡಲಿ ತಾವು 5 ದಶಕಗಳಿಂದ ಜನಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಇಂತಹ ಟೀಕೆಗಳನ್ನು ಸ್ವಾಗತಿಸುವುದಾಗಿ ತಿಳಿಸಿದರು. ಬರವಣಿಗೆಯಲ್ಲಿರುವ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಆದರೆ ಸಂವಿಧಾನಕ್ಕೆ ಚ್ಯುತಿ ತರುವ ಕೆಲಸ ನಡೆಯುತ್ತಿದೆ.
ಆರೆಸ್ಸೆಸ್ ತನ್ನ ಸಿದ್ಧಾಂತವನ್ನು ಪ್ರಧಾನಿ ನರೇಂದ್ರಮೋದಿ ಅವರ ಮೂಲಕ ಅನುಷ್ಠಾನಗೊಳಿಸುವ ಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.