ಬೆಂಗಳೂರು: ಕಳೆದ ವಾರದಿಂದ 9-12ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, ಇದೀಗ ಪ್ರಾಥಮಿಕ ಶಾಲಾ ಮಕ್ಕಳಿಗೂ ತರಗತಿಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ.
1-8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದ್ದು, ಇಂದು ಸಂಜೆ 4 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತಿದೆ.
ಒಂದು ವೇಳೆ ಸಲಹಾ ಸಮಿತಿ ತಜ್ಞರು ಪ್ರಾಥಮಿಕ ಶಾಲೆ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಿದರೆ ಸೆಪ್ಟೆಂಬರ್ ಮೊದಲ ವಾರದಿಂದಲೇ ಭೌತಿಕ ತರಗತಿಗಳು ಆರಂಭವಾಗಲಿವೆ.
ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚುತ್ತಿರುವುದರಿಂದ 1-5ನೇ ತರಗತಿಗಳಿಗೆ ಶಾಲೆಗೆ ಬರದಂತೆ ಸೂಚಿಸುವ ಸಾಧ್ಯತೆಯೂ ಇದ್ದು, 6,7,8ನೇ ತರಗತಿ ಮಕ್ಕಳಿಗೆ ಮಾತ್ರ ಶಾಲೆಗೆ ಬರುವಂತೆ ಸೂಚಿಸುವ ಸಾಧ್ಯತೆ ಕೂಡ ದಟ್ಟವಾಗಿದೆ ಎನ್ನಲಾಗಿದೆ. ಹಾಗೊಂದು ವೇಳೆ ಶಾಲೆ ಆರಂಭವಾದರೆ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿ ತರಗತಿಗಳು ಆರಂಭವಾಗುವುದು ಬಹುತೇಕ ಖಚಿತವಾಗಿದೆ.