ಈರುಳ್ಳಿ ಖರೀದಿ ಕೇಂದ್ರಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಆರಂಭಿಸುವಂತೆ ಪ್ರತಿಭಟನೆ ನಡೆದಿದೆ.
ಬೆಂಬಲ ಬೆಲೆಯಲ್ಲಿ ಈರುಳ್ಳಿ ಕೇಂದ್ರಗಳನ್ನು ಶುರುಮಾಡಬೇಕು. ಹೀಗಂತ ಒತ್ತಾಯಿಸಿ ಹರಪನಹಳ್ಳಿ ತಾಲೂಕಿನ ಮೈದೂರು ಗ್ರಾಮದ ರೈತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಿದರು. ಗ್ರಾಮದ ರೈತರು ಕೃಷಿಯಿಂದಲೇ ಜೀವನ ನಡೆಸುತ್ತಿದ್ದಾರೆ. 500 ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆದಿದ್ದಾರೆ. ಈಗಾಗಲೇ ಕಟಾವು ಮಾಡಿ ಈರುಳ್ಳಿ ಸಂಗ್ರಹಿಸಲಾಗಿದೆ. ಆದರೆ ಬೆಲೆ ಕುಸಿತ ಕಂಡಿರುವುದು ರೈತರಿಗೆ ಆತಂಕ ತಂದಿದೆ.
ರಾಜ್ಯ ಸರ್ಕಾರ ಪಟ್ಟಣದಲ್ಲಿ ಬೆಂಬಲ ಬೆಲೆಯ ಈರುಳ್ಳಿ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿದರು. ಖರೀದಿ ಕೇಂದ್ರ 10 ದಿನಗಳೊಳಗೆ ಆರಂಭಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಸಿದರು.