ಬೆಂಗಳೂರು: ಉಪ ಮುಖ್ಯಮಂತ್ರಿ ಹುದ್ದೆ ಕುರಿತು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಹೇಳಿದ್ದಾರೆ.
ಸೋಮವಾರ (ಇಂದು) ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪರಮೇಶ್ವರ್ ಅವರು 'ಉಪ ಮುಖ್ಯಮಂತ್ರಿ ಆಗುವ ಬಯಕೆ ಇರುವುದು ಸಹಜ. ಆದರೆ ಇದನ್ನೆಲ್ಲ ಪಕ್ಷದ ವರಿಷ್ಠರು ನವದೆಹಲಿಯಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ' ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ