Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಐಸಿಯುನಲ್ಲೇ ಮಾಜಿ ಸಿಎಂ ಎಸ್ ಎಂ ಕೃಷ್ಣಗೆ ಚಿಕಿತ್ಸೆ ಮುಂದುವರೆಸಿದ ವೈದ್ಯರು

S M Krishna

Sampriya

ಬೆಂಗಳೂರು , ಶನಿವಾರ, 11 ಮೇ 2024 (20:01 IST)
Photo Courtesy X
ಬೆಂಗಳೂರು: ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರಿಗೆ ಇದೀಗ ಐಸಿಯುನಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.

ಕಳೆದ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ ಎಂ ಕೃಷ್ಣ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ವಯೋಸಹಜ ಕಾಯಿಲೆಯಿಂದ ಕೆಲ ದಿನಗಳ ಹಿಂದೆ ಎಸ್‌ಎಂಕೆ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಾಜಿ ಮುಖ್ಯಮಂತ್ರಿಗಳಿಗೆ ಡಾ.ಸತ್ಯನಾರಾಯಣ ಮೈಸೂರು ಮತ್ತು ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ.

ಏಪ್ರಿಲ್ 21ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ 91 ವರ್ಷ ವಯಸ್ಸಿನ ಎಸ್‌ಎಂಕೆಯವರನ್ನು ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಮತ್ತೇ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾಹಿರಾಮ್ ಪಹಲ್ವಾನ್ ಪರ ರೋಡ್ ಶೋ ನಡೆಸಿದ ಅರವಿಂದ್ ಕೇಜ್ರಿವಾಲ್