Publish Date: Thu, 06 Jul 2023 (15:35 IST)
Updated Date: Thu, 06 Jul 2023 (15:58 IST)
ಭಾರೀ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ, ಕುಮಟ ತಾಲೂಕಿನ ಬರ್ಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕಾರು ಕುಮಟಾ ಕಡೆಯಿಂದ ಅಂಕೋಲಾ ಕಡೆ ಚಲಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಕಾರಿನಲ್ಲಿದ್ದವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.