ಹಾಸನ : ನಿನ್ನೆ ನಡೆದ ಜೆಡಿಎಸ್ ಸಮಾವೇಶವೊಂದರಲ್ಲಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡರು ಕಣ್ಣೀರು ಹಾಕಿದ್ದಾರೆ.
ಜಿಲ್ಲೆಯ ಹೊಳೆನರಸೀಪುರದಲ್ಲಿ ಆಯೋಜಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಎಚ್.ಡಿ. ದೇವೇಗೌಡರು ಅಧಿಕೃತವಾಗಿ ಹಾಸನ ಕ್ಷೇತ್ರವನ್ನು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟು ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಆ ವೇಳೆ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.
ದೇವೇಗೌಡರು ತಮ್ಮ ನಿರ್ಧಾರವನ್ನು ಘೋಷಣೆ ಮಾಡುತ್ತಿದ್ದ ಹಾಗೇ ಅವರ ಹಿಂದೆಯೇ ನಿಂತಿದ್ದ ಮೊಮ್ಮಗ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಇದನ್ನು ನೋಡಿ ವೇದಿಕೆಯ ಹಿಂದಿನ ಸಾಲಿನಲ್ಲಿದ್ದ ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ಕಣ್ಣೀರು ಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.