ಸಾರಿಗೆ ಸಚಿವರ ಸ್ವಕ್ಷೇತ್ರದಲ್ಲಿಯೇ ಬಸ್ ಗಳಿಗಾಗಿ ಹೋರಾಟ ಹಾಗೂ ಪರದಾಟ ನಡೆಯುತ್ತಿದೆ.
ಲಕ್ಷ್ಮಣ ಸವದಿ ಕ್ಷೇತ್ರದಲ್ಲಿಯೇ ಬಸ್ ಗಾಗಿ ಹೋರಾಟ ನಡೆಯುತ್ತಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ಕೃಷ್ಣಾ ನದಿ ನೀರು ಹೋರಾಟ ಸಮಿತಿ ಮತ್ತು ರೈತ ಹಿತರಕ್ಷಣಾ ಜಾಗೃತಿ ಸಮಿತಿಯಿಂದ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಲಾಯಿತು.
ಅಥಣಿ ಹಾಗೂ ಕಾಗವಾಡ ತಾಲೂಕಿನ 109 ಕ್ಕೂ ಹೆಚ್ಚು ಗ್ರಾಮಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒಂದು ವಾರದ ಒಳಗೆ ಸಮರ್ಪಕ ಬಸ್ ವ್ಯವಸ್ಥೆ ಮಾಡುವಂತೆ ಆಗ್ರಹಿಸಲಾಯಿತು.
ಬಹುತೇಕ ಕಡೆ ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವದು ಮತ್ತು ಹಲವೆಡೆ ಬಸ್ ಸಂಚಾರ ವಿರಳವಾಗಿದ್ದು ಹೆಚ್ಚುವರಿ ಬಸ್ ಬಿಡಬೇಕು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಾಲೆ - ಕಾಲೇಜು ಸಮಯಕ್ಕೆ ಪೂರಕವಾಗಿ ಬಸ್ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸೋದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.