Publish Date: Thu, 20 Sep 2018 (20:34 IST)
Updated Date: Thu, 20 Sep 2018 (20:35 IST)
ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ಹಾಗೂ ಪತನಗೊಳಿಸಲು ಬಿಜೆಪಿ ನಾಯಕರು ತೆರೆಮರೆಯ ಯತ್ನ ನಡೆಸುತ್ತಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಮೇಲ್ನೋಟಕ್ಕೆ ನಾನೇನು ಮಾಡುತ್ತಿಲ್ಲ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಕಾಂಗ್ರೆಸ್ ಶಾಸಕರನ್ನು ಸೆಳೆಯುತ್ತಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವ ಡಿ.ಕೆ.ಶಿವಕುಮಾರ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಒಳಗೊಳಗೆ ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ ಎಂದು ದೂರಿದರು. ತಮ್ಮ ಪಕ್ಷದ ಶಾಸಕರಿಗೆ ಆಮಿಷಗಳಿಗೆ ಬಲಿಯಾಗದಂತೆ ಇರಬೇಕು ಎಂದು ಹೇಳಿದ್ದಾಗಿ ತಿಳಿಸಿದರು.