ಬೆಂಗಳೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನುಭವಿಸಲು ಹಿರಿಯರ ಕಡೆಗಣನೆ, ಕಾಂಗ್ರೆಸ್ ಸಚಿವರ ಸಂಘಟನಾ ಕೊರೆತೆಯೇ ಕಾರಣ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಆರೋಪ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ರಾಮಲಿಂಗಾ ರೆಡ್ಡಿ ಅವರು, ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು. ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರುವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಸಹ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ಪಕ್ಷದ ಕುರಿತು ಏನೂ ಅರಿವಿಲ್ಲದೆ ಬಂದ ಹೊಸಬರಿಗೆ, ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಈ ಪರಿಸ್ಥಿತಿಗೆ ಕಾರಣ. ರಾಜ್ಯದ ಮುಂಚೂಣಿ ನಾಯಕರು ಹಾಗೂ ಉಸ್ತುವಾರಿಗಳು ಪಕ್ಷದ ಆಂತರಿಕ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಎಡವಿದ್ದಾರೆ ಎಂದು ಅವರು ಗುಡುಗಿದ್ದಾರೆ.