ವಿಧಾನಸಭೆ ಅಧಿವೇಶನದಲ್ಲಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಕುರಿತ ಪ್ರಕರಣ ಸದನದಲ್ಲಿ ಕೋಲಾಹಲ ಸೃಷ್ಟಿಸಿತು.
ಗಣಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್‌ಮಾರ್ಟಂ ವರದಿ ಕೊಡಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ವೈದ್ಯ ಶೈಲಜಾ ಅವರಿಗೆ ಒತ್ತಡ ಹೇರಿದ್ದಾರೆ ಎನ್ನುವುದು ಸಿಬಿಐ ತನಿಖೆಯಿಂದ ಬಹಿರಂಗವಾಗಿದೆ ಎಂದು ಬಿಜೆಪಿ ಸದಸ್ಯರು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
ಸರಕಾರ ಸಚಿವ ಕೆ.ಜೆ.ಜಾರ್ಜ್ ಬಗ್ಗೆ ಮೃದು ಧೋರಣೆ ತಳೆದಿದೆ. ಕೂಡಲೇ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಕೆ.ಜೆ.ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ನಿಜವೆಂದು ನಂಬುವುದು ಸಾಧ್ಯವಿಲ್ಲ. ತನಿಖೆ ಮುಗಿಯಲಿ. ತನಿಖೆ ಮುಗಿದ ನಂತರ ಸತ್ಯಾಸತ್ಯತೆ ಬಹಿರಂಗವಾಗಲಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಉತ್ತರಿಸಿದರು.ಆದರೆ, ಸಚಿವರ ಮಾತಿಗೆ ತೃಪ್ತರಾಗದ ಬಿಜೆಪಿ ಸದಸ್ಯರು ಸದನದಲ್ಲಿ ಕೋಲಾಹಲ ಸೃಷ್ಟಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.