Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಆ ಹುಡುಗಿ ಫೇಸ್ ಬುಕ್ ಲೈವ್ ನಲ್ಲೇ ಆತ್ಮಹತ್ಯೆಗೆ ಯತ್ನಿಸಿದಳು ಯಾಕೆ ಗೊತ್ತಾ?

ಆ ಹುಡುಗಿ ಫೇಸ್ ಬುಕ್ ಲೈವ್ ನಲ್ಲೇ ಆತ್ಮಹತ್ಯೆಗೆ ಯತ್ನಿಸಿದಳು ಯಾಕೆ ಗೊತ್ತಾ?
ವಿಜಯಪುರ , ಮಂಗಳವಾರ, 2 ಅಕ್ಟೋಬರ್ 2018 (20:27 IST)
ತನ್ನದಲ್ಲದ ತಪ್ಪಿಗೆ 18 ವರ್ಷದ ಯುವತಿಯೊಬ್ಬಳು ಫೇಸ್ ಬುಕ್ ಲೈವ್ ನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ತನ್ನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಕಾರಣಕ್ಕಾಗಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಫೇಸ್ ಬುಕ್ ಲೈವ್ ನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಹುಡುಗಿ ವಿಜಯಪುರ ಜಿಲ್ಲೆಯ ಹಂಚಿನಾಳ ಗ್ರಾಮದವಳು.

ನೊಂದ ಯುವತಿ ಫೇಸ್ ಬುಕ್ ಲೈವ್ ನಲ್ಲಿಯೇ ಮಾತ್ರೆ ಹಾಗೂ ವಿಷದ ಪುಡಿ ಸೇವಿಸಿದ್ದಾಳೆ. ಜಮೀನು ತಕರಾರರು ಇದ್ದ ಕಾರಣ ಸಂಬಂಧಿಗಳೇ ಈ ಯುವತಿಯ ಕುಟುಂಬಕ್ಕೆ ಬಹಿಷ್ಕಾರ ಹಾಕಿತ್ತು.

ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಕಷ್ಟಕ್ಕೆ ಸರಕಾರ ಸ್ಪಂದಿಸುತ್ತದೆ ಎಂದ ಸಿಎಂ