ಮನೆಮುಂದೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯನ್ನ ವ್ಯಕ್ತಿಯೊಬ್ಬ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಬಾಲಕಿಯನ್ನು ಕೌಜಲಗಿ ಗ್ರಾಮದ ಪ್ರೇಮಾ ಹೊಸಮಣಿ ಎಂದು ಗುರುತಿಸಲಾಗಿದೆ. ಮಲ್ಲಪ್ಪ ಹೊಸಮನಿ ಎಂಬಾತ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ.
ಪ್ರೇಮಾಳನ್ನು ಕೊಲೆ ಮಾಡತ್ತಿರುವುದನ್ನು ಕಂಡ ಮತ್ತೊಬ್ಬ ಬಾಲಕಿಯಿಂದ ಸತ್ಯ ಹೊರಬಂದಿದೆ. ಸ್ಥಳಕ್ಕೆ ಕುಲಗೋಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಮಲ್ಲಪ್ಪನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಈ ಕುರಿತು ಕುಲಗೋಡ ಠಾಣೆಯಲ್ಲಿ ದೂರು ದಾಖಲಾಗಿದೆ.