Publish Date: Sat, 23 Apr 2022 (11:48 IST)
Updated Date: Sat, 23 Apr 2022 (10:56 IST)
ಬೆಂಗಳೂರು : ಹೊಸಪೇಟೆಯ ಬಿಜೆಪಿ ಕಾರ್ಯಕಾರಿಣಿ ಮುಗಿದಿದ್ದು, ಪರಸ್ಪರ ಹೊಗಳಿಕೆಗೆ ಸೀಮಿತವಾಗಿದ್ದು ಕಂಡುಬಂತು.
ಸಾಲು ಸಾಲು ವಿವಾದ, ಈಶ್ವರಪ್ಪ ಪ್ರಕರಣ ಸದ್ದು ಮಾಡುತ್ತಿರುವ ಸಂದರ್ಭದಲ್ಲೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಬೊಮ್ಮಾಯಿ ಸರ್ಕಾರಕ್ಕೆ ಶಹಬ್ಬಾಶ್ಗಿರಿ ನೀಡಿದ್ದಾರೆ.
ರಾಜ್ಯದಲ್ಲಿ ಸ್ವರ್ಣಯುಗ ಆರಂಭವಾಗಿದೆ ಎಂದು ನಡ್ಡಾ ಹೊಗಳಿದ್ದಾರೆ. ಪ್ರಮುಖರೊಂದಿಗೆ ಸಭೆ ನಡೆಸಿದ ನಡ್ಡಾ, ಟಾರ್ಗೆಟ್ 150 ರೀಚ್ ಆಗಲು, ಹಿಂದುತ್ವದ ಜೊತೆ ಅಭಿವೃದ್ಧಿ ಸೂತ್ರ ಅಳವಡಿಸಿಕೊಳ್ಳಲು ಸಲಹೆ ನೀಡಿದ್ದಾರೆ. 2023ರಲ್ಲಿ ಬಿಜೆಪಿ ಮತ್ತೆ ಇಲ್ಲಿ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಪ್ರಾದೇಶಿಕ ಪಕ್ಷವಾಗಿದೆ. ಜೆಡಿಎಸ್, ಶಿವಸೇನಾ, ಟಿಡಿಪಿ, ಪಿಡಿಪಿ ಸೇರಿದಂತೆ ಹತ್ತಾರು ಪಕ್ಷಗಳು ಪ್ರಾದೇಶಿಕ ಪಕ್ಷವಾಗಿ ದೇಶದ ವಿವಿಧೆಡೆ ಇವೆ.