Publish Date: Wed, 01 Mar 2023 (14:21 IST)
Updated Date: Wed, 01 Mar 2023 (14:24 IST)
ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ ವಿಚಾರ ಅಧಿಕಾರಿಗಳ ಜೊತೆ ಒಳ್ಳೆಯ ರೀತಿಯ ಚರ್ಚೆಯಾಗಿದೆ. ಶೇ.17ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಅಂತ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಅಂತಾ ವಿಧಾನಸೌಧದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿಕೆ ನೀಡಿದ್ರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಉತ್ತಮವಾಗಿ ಸ್ಪಂದಿಸಿದೆ. ಸುದ್ದಿಗೋಷ್ಠಿಯಲ್ಲಿ ನಮ್ಮ ನಿರ್ಧಾರ ತಿಳಿಸುತ್ತೇವೆ ಅಂತಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದ್ರು.