ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ನಡೆಯುವ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲಾ ಎಂದು ಜೆಡಿಯು ಘೋಷಣೆ ಮಾಡಿದೆ.
ಜೆಡಿಯು ಪಕ್ಷದ ರಾಜ್ಯಾಧ್ಯಕ್ಷ ಡಾ. ಎಂ. ಪಿ. ನಾಡಗೌಡ ಅವರು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಅಂತಾ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡೋದು ಸರಿಯಲ್ಲಾ.
ಅಖಂಡ ಕರ್ನಾಟಕಕ್ಕೆ ಬೆಂಬಲ ವ್ಯಕ್ತಪಡಿಸುತ್ತೇನೆ. ಅಗಸ್ಟ್ 2 ರಂದು ಉತ್ತರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲಾ. ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಕಿವಿಮಾತು ಹೇಳಿದ್ದಾರೆ.