ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಬೇಡ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಪ್ರಚಾರ ಕೈಗೊಳ್ಳಲಿ ಎಂದು ಕೆಲ ಕಾಂಗ್ರೆಸ್ ಮುಖಂಡರು ಸಲಹೆ ನೀಡಿದ್ದಾರೆ.
ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ ವೇಣುಗೋಪಾಲ್ ಮುಂದೆ ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುಗಳ ಸುರಿಮಳೆಗೈದರು.
ಕಾಂಗ್ರೆಸ್ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುಗಳು ನೀಡಿರುವುದು ಕಂಡ ವೇಣುಗೋಪಾಲ್ ಶಾಕ್‌ಗೊಳಗಾದರು.
ಅಭಿಪ್ರಾಯ ಸಂಗ್ರಹದ ವೇಳೆ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರಿಗೆ ಮಾತ್ರ ಮಣೆಹಾಕುತ್ತಿದ್ದಾರೆ. ನಿಗಮ ಮಂಡಳಿ ನೇಮಕಕ್ಕೆ ಅನಗತ್ಯ ವಿಳಂಬ ಮಾಡಿದರು. ಪರಮೇಶ್ವರ್ ಸಂಪುಟದಲ್ಲಿರುವುದರಿಂದ ತುಟಿ ಬಿಚ್ಚುತ್ತಿಲ್ಲ. ಪಕ್ಷ ಸಂಘಟನೆಗೆ ಸಿಎಂ ಸಾಥ್ ನೀಡಿಲ್ಲ ಎಂದು ಆರೋಪಿಸಿದರು.
ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲಿಲ್ಲ. ಕೆಪಿಸಿಸಿ ಅಧ್ಯಕ್ಷರನ್ನು ಕೂಡಲೇ ಬದಲಾವಣೆ ಮಾಡಬೇಕು. ಅವರಿಗೆ
ಎರಡು ಸ್ಥಾನಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಕೆಪಿಸಿಸಿ ಸದಸ್ಯರು ಒತ್ತಾಯಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.