ಕಾನೂನು ಎಲ್ಲರಿಗೂ ಒಂದೇಯಾಗಿದ್ದು, ವಿದ್ವತ್ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಕಾನೂನು ಲೋಪವೆಸಗಿದ ಅಧಿಕಾರಿಗಳನ್ನು ಅಮಾನತುಗೊಳಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಪರಿಷತ್‍ನ ಕಲಾಪದಲ್ಲಿ ಪ್ರತಿಪಕ್ಷದ ನಿಲುವಳಿ ಸೂಚನೆ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಶಾಸಕರಿಗೂ, ಸಚಿವರಿಗೂ, ಸಾಮಾನ್ಯರಿಗೂ ಒಂದೇಯಾಗಿದ್ದು ಯಾವುದೇ ಪಕ್ಷಪಾತ ಧೋರಣೆ ಅನುಸರಿಲ್ಲ. ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಬೆಂಬಲಿಗ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮೊಹಮ್ಮದ್ ನಲಪಾಡ್ ವಿರುದ್ಧ 11 ಸೆಕ್ಷನ್‍ಗಳನ್ನು ದಾಖಲಿಸಲಾಗಿದೆ. 307 ಕಲಂ ಕೂಡ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪರ, ವಿರೋಧ ಕ್ರಮ ಕೈಗೊಂಡಿಲ್ಲ. ಸ್ವಲ್ಪ ವಿಳಂಬವಾಗಿದೆ ಅಷ್ಟೇ ಎಂದಿದ್ದಾರೆ.
ಆರೋಪಿಯನ್ನು ಗಡಿಪಾರು ಮಾಡಲು ಸಾಧ್ಯವಿಲ್ಲ. ಒಂದೇ ಪ್ರಕರಣಕ್ಕೆ ಗಡಿಪಾರು ಮಾಡಲು ಬರುವುದಿಲ್ಲ. ಪದೇ ಪದೇ ಇಂತಹ ಪ್ರಕರಣ ಮರುಕಳಿಸಿದರೆ ಗೂಂಡಾ ಕಾಯ್ದೆ ಜಾರಿಗೊಳಿಸಬಹುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.