ಮುಂಬರುವ ವಿಧಾನಸಭೆ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗಿಂತ ಮುನ್ನವೇ ಜೆಡಿಎಸ್ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ. ಹೆಚ್ಚಿನ ಆಕಾಂಕ್ಷಿಗಳು ಇರುವ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುತ್ತಿದೆ. ರಾಷ್ಟ್ರೀಯ ಪಕ್ಷಗಳಿಗಿಂತ ಮೊದಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, ಯಾವುದೇ ಅನುಮಾನ ಬೇಡ ಎಂದರು.
ಬಿಜಾಪುರದಲ್ಲಿ ರೈತರ, ಬೆಂಗಳೂರಿನಲ್ಲಿ ದಲಿತರ ಹಾಗೂ ತುಮಕೂರು, ರಾಯಚೂರಿನಲ್ಲಿ ಅಲ್ಪಸಂಖ್ಯಾತರ ಸಮಾವೇಶಗಳನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.