ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕರಲ್ಲಿ ಭಿನ್ನಮತ ಮೂಡಿದೆ.
ಸದಾಶಿವ ವರದಿ ಜಾರಿಗೊಳಿಸುವುದರಿಂದ ಚುನಾವಣೆಯಲ್ಲಿ ಪರಿಣಾಮ ಬೀರಲ್ಲ ಎಂದು ಸಂಸದ ಕೆ.ಎಚ್.ಮುನಿಯಪ್ಪ ಹೇಳಿದ್ದರೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಚುನಾವಣೆಯ ಸಂದರ್ಭದಲ್ಲಿ ಜಾರಿಗೊಳಿಸುವುದು ಬೇಡ ಎಂದು ಹೇಳಿದ್ದಾರೆ.
ಸದಾಶಿವ ವರದಿ ಜಾರಿಯಿಂದ ದಲಿತರ ನಡುವಿನ ಒಗ್ಗಟ್ಟು ಮುರಿದಂತಾಗುತ್ತದೆ ಎಂಬ ಅಭಿಪ್ರಾಯ ಕೂಡ ವ್ಯಕ್ತವಾಗಿದೆ. ಸಭೆಯಲ್ಲಿ ಒಮ್ಮತ ಮೂಡದ ಪರಿಣಾಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವೊಲಿಸುವ ಪ‍್ರಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಸಚಿವ ಆಂಜನೇಯ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.